ಅಭಿಪ್ರಾಯ / ಸಲಹೆಗಳು

ಡಯಟ್ ಪರಿಚಯ

ಪ್ರಾಥಮಿಕ ಶಿಕ್ಷಣದ ಸಾರ್ವತ್ರಿಕರಣ ಮತ್ತು ವಯಸ್ಕರ ಸಾಕ್ಷರತೆಯನ್ನು ಸಾಧಿಸಲು 1986 ರ ರಾಷ್ಟ್ರೀಯ ಶಿಕ್ಷಣ ನೀತಿ, 1988 ರ ರಾಷ್ಟ್ರೀಯ ಸಾಕ್ಷರತಾ ಮಿಷನ್-2001ರ ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಜಾರಿಗೆ ತರಲಾಯಿತು

1986ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುವವರೆಗೂ ರಾಷ್ಟ್ರ ಮಟ್ಟದಲ್ಲಿ ಎನ್.ಸಿ.ಇ.ಆರ್.ಟಿ ಹಾಗೂ ರಾಜ್ಯ ಮಟ್ಟದಲ್ಲಿ ಎಸ್.ಎಲ್.ಇ.ಆರ್.ಟಿ ಗಳು ಶಿಕ್ಷಕರಿಗೆ ತರಬೇತಿ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಹಾಗೂ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಣೆಯ ಜವಾಬ್ದಾರಿಯನ್ನು ಹೊತ್ತಿದ್ದವು. ಇದರಂತೆಯೇ ವಯಸ್ಕರ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ಕೇಂದ್ರಿಯ ವಯಸ್ಕ ಶಿಕ್ಷಣ ನಿರ್ದೇಶನಾಲಯ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಸಂಪನ್ಮೂಲ ಕೇಂದ್ರಗಳು ಈ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದವು. ಹೆಚ್ಚುವ್ಯಾಪ್ತಿ ಹೊಂದಿರುವ ಪ್ರಾಥಮಿಕ ಶಿಕ್ಷಣ ಹಾಗೂ ವಯಸ್ಕ ಶಿಕ್ಷಣ ವ್ಯವಸ್ಥೆಗಳಿಗೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸಂಸ್ಥೆಗಳಿಂದ ಮಾತ್ರ ಸಂಪನ್ಮೂಲ ಒದಗಿಸುವುದು ದುಸ್ತರವಾಗಿರುವುದನ್ನು ಮನಗಂಡು ರಾಷ್ಟ್ರೀಯ ಶಿಕ್ಷಣ ನೀತಿಯು ಜಿಲ್ಲಾ ಹಂತದಲ್ಲಿ ಮೂರನೇ ಸ್ಥಿರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್ ) ಸ್ಥಾಪಿಸಲು ಒಲವು ತೋರಿತು.

ಜಿಲ್ಲಾ ಹಂತದಲ್ಲಿ ಡಯಟ್ ಗಳ ಸ್ಥಾಪನೆಯಿಂದ ಶಿಕ್ಷಕರಿಗೆ ಅಗತ್ಯ ಶೈಕ್ಷಣಿಕ ಸಂಪನ್ಮೂಲ ಒದಗಿಸುವುದರ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮ ಪಡಿಸುವ ಆಶಯದಿಂದ ಡಯಟ್ ಸ್ಥಾಪನೆಯಾಯಿತು.  ಅನೌಪಚಾರಿಕ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತರಿಗೆ ನಿರಂತರವಾಗಿ ಅಗತ್ಯ ಬೆಂಬಲ ನೀಡಲು ಹಾಗೂ ಜಿಲ್ಲಾ ಹಂತದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅಗತ್ಯವಾದ ಸೇವಾಪೂರ್ವ ಹಾಗೂ ಸೇವಾವಧಿ ಶಿಕ್ಷಣವನ್ನು ಸಮರ್ಥವಾಗಿ ನೀಡುವ ಉದ್ದೇಶದಿಂದ ಏಳನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ ಡಯಟ್ ಸ್ಥಾಪನೆಯಾಯಿತು.

ತುಮಕೂರಿನಲ್ಲಿ ಅಸ್ಥಿತ್ವದಲ್ಲಿದ್ದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿ 1986 ಮತ್ತು 1992ರ ಕ್ರಿಯಾ ಯೋಜನೆಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಉನ್ನತೀಕರಿಸಲ್ಪಟ್ಟು ದಿನಾಂಕ: 19/01/1993ರಲ್ಲಿ ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸ್ಥಾಪನೆಯಾಯಿತು.

ಇತ್ತೀಚಿನ ನವೀಕರಣ​ : 07-07-2022 01:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ತುಮಕೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080